
ಮಂಗಳೂರು: ದಿಗಂತ್ ನಾಪತ್ತೆಗಿಂತಲೂ ಪ್ರಕರಣವನ್ನು ಬಳಸಿಕೊಂಡು ಕೋಮು ಸಂಘರ್ಷಕ್ಕೆ ಬಳಸಿ ಘರ್ಷಣೆ ಸಾಧ್ಯತೆ ಇತ್ತು, ಆದರೆ ಅದನ್ನು ಪೊಲೀಸರು ತಡೆದಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.



ಮಂಗಳೂರಿನಲ್ಲಿ ಮಾತನಾಡಿದ ಅವರು ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ದಿಂಗತ್ ನಾಪತ್ತೆ ಪ್ರಕರಣ ಸಂದರ್ಭ ಕೋಮು ಘರ್ಷಣೆಗೆ ಕೆಲವು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಪೊಲೀಸರು ಅದನ್ನು ತಡೆದಿದ್ದಾರೆ. ಪೊಲೀಸರ ಕ್ರಮಕ್ಕೆ ರಮಾನಾಥ ರೈ ಶ್ಲಾಘಿಸಿದರು. ಮತೀಯ ಶಕ್ತಿಗಳಿಗೆ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ, ಅಭಿವೃದ್ಧಿಯಾಗುವುದು ಮುಖ್ಯವಲ್ಲ. ಆದರೆ ಹಿಂಸೆಗೆ ಅಹಿಂಸೆ, ದ್ವೇಷಕ್ಕೆ ಪ್ರೀತಿಯೇ ಉತ್ತರ ಎಂದು ತಿಳಿದವರು ನಾವು ಎಂದವರು ಹೇಳಿದರು.