August 30, 2025
Screenshot 2025-03-14 102734
ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು ಶುಕ್ರವಾರ ಮಣಿಪಾಲ ಆಸ್ಪತ್ರೆಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ.ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ದಲ್ಲಿ ಮಾ.4ರಂದು ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಇಸಾಕ್ ತನ್ನ ಕಾರಿನಲ್ಲಿ ಇತರ ವಾಹನ ಗಳಿಗೆ ಢಿಕ್ಕಿ ಹೊಡೆದು ತಪ್ಪಿಸಿಕೊಂಡಿದ್ದನು. ತನಿಖೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಇಸಾಕ್ ಹಾಗೂ ಆತನಿಗೆ ಸಹಕಾರ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮಾ.12ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಂಧಿಸಿತ್ತು.ಇವರನ್ನು ಖಾಸಗಿ ವಾಹನದಲ್ಲಿ ಮಣಿಪಾಲಕ್ಕೆ ಕರೆತರುವಾಗ ದಾರಿ ಮಧ್ಯೆ ಹಿರಿಯಡ್ಕ ಸಮೀಪ ಇಸಾಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.ಈ ವೇಳೆ ಪೊಲೀಸ್ ನಿರೀಕ್ಷಕ ದೇವರಾಜ್ ಇಲಾಖಾ ಪಿಸ್ತೂಲಿನಿಂದ ಮೊದಲು ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದರು.ಬಳಿಕ ಇಸಾಕ್ ಪೊಲೀಸ್ ನಿರೀಕ್ಷಕರ ಕೈಯಲ್ಲಿದ್ದ ಪಿಸ್ತೂಲನ್ನು ಕಿತ್ತುಕೊಳ್ಳಲು ಮುನ್ನುಗ್ಗಿದನು. ಆಗ ಅವರು ಆತನ ಕಡೆ ಎರಡು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಒಂದು ಗುಂಡು ಆತನ ಎಡಗಾಲಿಗೆ ತಾಗಿ ಆತ ಅಲ್ಲಿಯೇ ಕುಸಿದು ಬಿದ್ದನು ಎಂದು ತಿಳಿದುಬಂದಿದೆ.ಇನ್ನು ಗುಂಡೇಟು ತಗುಲಿ ತೀವ್ರವಾಗಿ ಗಾಯ ಗೊಂಡ ಇಸಾಕ್‌ನನ್ನು ಮೊದಲು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಇಸಾಕ್‌ನನ್ನು ಕಾಲಿನ ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಗುರುವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪೊಲೀಸರು ಸ್ಥಳಾಂತರ ಮಾಡಿದ್ದಾರೆ. ಇದೀಗ ಇಸಾಕ್ ಚೇತರಿಸಿಕೊಳ್ಳುತ್ತಿದ್ದು, ಸಂಪೂರ್ಣ ಗುಣಮುಖನಾದ ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

About The Author

Leave a Reply