
ಪುತ್ತೂರು: ಮಸೀದಿಯಿಂದ ಹಿಂತಿರುಗಿತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.



ಬಂಗಾಲಿ ಮೂಲದ ತಂಡವು ಅಲ್ಲಿ ಹೋಳಿ ಹಬ್ಬ ಆಚರಿಸುತ್ತಿದ್ದು, ಈ ವೇಳೆ ಮಸೀದಿಯಿಂದ ಹಿಂತಿರುಗುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಮೂವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.