November 25, 2025
WhatsApp Image 2025-03-15 at 2.07.37 PM

ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿದೆ. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.

About The Author

Leave a Reply