November 24, 2025
WhatsApp Image 2025-03-15 at 9.15.44 AM

ಮಂಗಳೂರು : ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ.

ಬೆಳಗ್ಗೆ 10ಕ್ಕೆ ಮನೆಯಿಂದ ಹೋಗಿದ್ದು, ತನ್ನ ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೂಲತಃ ಪಶ್ಚಿಮ ಬಂಗಾಲ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ಗೋಪಿಬಲ್ಲವ್ ಪುರ ನಿವಾಸಿಗಳಾಗಿದ್ದು, ಪ್ರಸ್ತುತ ಚಹರೆ: 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಧರಿಸಿದ್ದರು. ಬಿಳಿ ಬಣ್ಣದ ಕನ್ನಡಕ ಧರಿಸಿರುತ್ತಾರೆ.

ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾರೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಈ ಚಹರೆಯ ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

About The Author

Leave a Reply