
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾವು ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳನ್ನು ಕಡಿಮೆ ಮಾಡಿದ್ದೇವೆ. ನೀವು ಮತ್ತು ಆರ್ ಎಸ್ ಎಸ್ ನವರು ಅಪರಾಧಗಳನ್ನು ಮಾಡುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.



ನಾವು ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳನ್ನು ಕಡಿಮೆ ಮಾಡಿದ್ದೇವೆ. ಅಪರಾಧಗಳನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡಿದ್ದೇವೆ. ನಾವು ಇನ್ನೂ ಅಪರಾಧಗಳನ್ನು ಕಡಿಮೆ ಮಾಡಲು ನೋಡುತ್ತಿದ್ದೇವೆ. ಆದರೆ ಅಪರಾಧಗಳನ್ನು ಮಾಡುವುದೇ ನೀವು. ನೀವು, ಮತ್ತೆ RSS ನವರು ಅಪರಾಧಗಳನ್ನು ಮಾಡುತ್ತೀರಿ. ಆರ್ ಎಸ್ ಎಸ್ ಹೆಸರು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸದನದಲ್ಲಿ ಗದ್ದಲ ಕೋಲಾಹಲ ಉಂಟಾಯಿತು.
ದೇಶದ್ರೋಹಿಗಳ ಮೇಲಿನ ಕೇಸ್ ವಿಥ್ ಡ್ರಾ ಮಾಡಿದ್ದೆ ನೀವು ಎಂದು ಬಿಜೆಪಿ ಸದಸ್ಯರು ಕಿಡಿಕಾರಿದರು.ಸಮುದಾಯಗಳ ನಡುವೆ ದ್ವೇಷ ತಂದವರು ನೀವು. ವಿಷಬೀಜ ಬಿತ್ತುವವರು ನೀವು. ಎಲ್ಲದಕ್ಕೂ ರೆಡಿಯಾಗಿದ್ದೇವೆ. ಆರ್ ಎಸ್ ಎಸ್ ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.