November 8, 2025
WhatsApp Image 2025-03-18 at 12.09.46 PM

ಮಂಗಳೂರು : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತವೊಂದು ಸಂಭವಿಸಿದ ಪರಿಣಾಮ ಕೈಕುಂಜೆ ನಿವಾಸಿ  ಯುವ ವಕೀಲ ಪ್ರಥಮ್ ಬಂಗೇರ (27) ನಿನ್ನೆ (ಮಾ.17) ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಬಿ.ಸಿ.ರೋಡಿನ ವಕೀಲ ಕೆ. ವೆಂಕಟ್ರಮಣ ಶೆಣೈಯವರ ಬಳಿ ವಕೀಲ ವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದ ಪ್ರಥಮ್ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚುರುಕಾಗಿದ್ದು, ಒಳ್ಳೆಯ ನೃತ್ಯಪಟುವಾಗಿದ್ದರು. ಕಳೆದ ನವೆಂಬರ್ ತಿಂಗಳಿನಲ್ಲಿ ಇವರ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಿ ಮನೆಯವರು ಮಾನವೀಯತೆ ತೋರಿದ್ದಾರೆ. ಮೃತರು ತಂದೆ ಮತ್ತು ಸಹೋದರನನ್ನು ಅಗಲಿದ್ದಾರೆ.

About The Author

Leave a Reply