March 15, 2026
WhatsApp Image 2025-03-24 at 3.43.02 PM

ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹೌದು, ಮನೆ ಪಾಯ ಹಾಕುವಾಗ ಚಿನ್ನದ ನಿಧಿ ಸಿಕ್ಕಿದೆ, ಚಿನ್ನದ ಬೆಲೆಗಿಂತ ಅರ್ಧ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಆರೋಪಿಗಳು ಮರದ ಹಲಗೆ ಹಾಗೂ ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ನಂತರ ನಕಲಿ ಚಿನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಚಿನ್ನ ತೆಗೆದುಕೊಳ್ಳು ಬರುವಂತೆ ಹೇಳಿ ಪದೇ ಪದೇ ಲೋಕೇಶನ್ ಚೇಂಜ್ ಮಾಡುತ್ತಿದ್ದರು. ಮಾಹಿತಿಯ ಮೇರೆಗೆ ಕೋರಮಂಗಲದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ.

ರಬಿಕುಲ್ ಇಸ್ಲಾಂ, ಇದೀಶ್ ಅಲಿ, ಅನ್ವರ್ ಹುಸೇನ್ ಬಂಧಿತ ಆರೋಪಿಗಳು. ಸದ್ಯ ಮೂವರನ್ನು ಬಂಧಿಸಿದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

About The Author

Leave a Reply