February 23, 2026
karnataka rain

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದೆ.

ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

About The Author

Leave a Reply