November 24, 2025
WhatsApp Image 2025-03-26 at 3.13.25 PM

ಕಡಬ : ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಣಾಜೆ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಈ ದಂಪತಿ ಕೊಣಾಜೆಯ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿತ್ತು. ಮಂಗಳವಾರ ಮಧ್ಯಾಹ್ನ ಊಟ‌ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮಗು ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದು, ತಾಯಿ‌ ದಿವ್ಯಾಂಶಿ ಸಿಂಗ್ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply