ನಿಟ್ಟೆ ಕಾಲೇಜು ವಿದ್ಯಾರ್ಥಿ ನಾಪತ್ತೆ ..!!

ಬೈಂದೂರು ಯಡ್ತರೆ ಗ್ರಾಮದ ನಿವಾಸಿ ನಿಟ್ಟೆ ಕಾಲೇಜು ವಿದ್ಯಾರ್ಥಿ ಅಬಿನಂದನ್(20) ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಬಿನಂದನ್ ನಿಟ್ಟೆ ಕಾಲೇಜಿನಲ್ಲಿ ದ್ವಿತಿಯ ವರ್ಷದ ವಿಎಲ್‌ಎಸ್‌ಐ ಪದವಿಯಲ್ಲಿ ವ್ಕಾಸಂಗ ಮಾಡುತ್ತಿದ್ದು ಕಾಲೇಜಿನ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದನು. ರಜೆಯಲ್ಲಿ ಬೈಂದೂರು ಮನೆಗೆ ಬಂದು ಹೋಗುತ್ತಿದ್ದನು.

ಫೆ.21ರಂದು ಮನೆಗೆ ಬಂದು ಮರುದಿನ ಮನೆಯಿಂದ ಕಾಲೇಜಿಗೆ ಹೋದವನು ಒಂದೆರಡು ಬಾರಿ ಕರೆ ಮಾಡಿದ್ದನು.ತಂದೆ ಮಹಾಬಲೇಶ್ವರ ಅವರು ಮಾ.26ರಂದು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಬಗ್ಗೆ ವಿಚಾರ ಮಾಡಿದಾಗ ಆತ ರಜೆಯಲ್ಲಿ ಹೋದವ ಕಾಲೇಜಿಗೆ ಬರಲಿಲ್ಲ ಎಂದು ಹೇಳಿದರು. ಆತನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು ಎಂದು ತಿಳಿದು ಬಂದಿದೆ.

ಆತನ ತಂದೆ ಬೈಂದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply