ಮುಸ್ಲಿಂ ಯುವಕನಿಂದ ಕ್ರಿಶ್ಚಿಯನ್ ಯುವತಿಯ ಅಪಹರಣ- ಲವ್ ಜಿಹಾದ್ ಆರೋಪ

ಉಡುಪಿ : ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿ ಸುತ್ತಿದ್ದಂತೆ ಮೊಹಮ್ಮದ್ ಅಕ್ರಮ್ ಉಡುಪಿ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ.
ಯುವತಿ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದು, ಕಾಲೇಜಿನಿಂದ ವಾಪಸು ಮನೆಗೆ ತೆರಳುವಾಗ ಅಪಹರಿಸಲಾಗಿದೆ ಎನ್ನಲಾಗಿದೆ. ಗಾಡ್ವಿನ್ ದೇವದಾಸ್ ಈ ಹಿಂದೆ ಅಕ್ರಮ್ ಮೊಹಮ್ಮದ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ಸೇಡು ತೀರಿಸಿ ಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದಾಖಲಿಸಿದ್ದಾರೆ.
ಅಪ್ರಾಪ್ತೆಯಾಗಿದ್ದಾಗಲೇ ನಮ್ಮ ಮಗಳಿಗೆ ಅಕ್ರಂ ಕಿರುಕುಳ ನೀಡಿದ್ದನು. ಐದು ವರ್ಷದ ಹಿಂದೆ ಪೋಕ್ಸೋ ಕೇಸು ದಾಖಲು ಮಾಡಿದ್ದೇವೆ. ಲೈಂಗಿಕ ಕಿರುಕುಳ ನೀಡಿಲ್ಲ ಎಂಬ ಕಾರಣಕ್ಕೆ ಕೇಸು ವಜಾ ಗೊಂಡಿತ್ತು. ಇದೀಗ, ಸೇಡು ತೀರಿಸಲು ಅಪಹರಿಸಿದ್ದಾನೆ” ಎಂದು ಪೋಷಕರಾದ ಮೇರುಸ್ ಪುಷ್ಪಲತಾ ಮತ್ತು ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.

Leave a Reply