
ಉಡುಪಿ: ರೆನಾಲ್ಟ್ ಟ್ರೈಬರ್ ಕಾರೊಂದು ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದ್ದು ಅದರಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಬಚಾವಾದ ಅಪರೂಪದ ಘಟನೆ ನಡೆದಿದೆ.



ದಂಪತಿ ಉಡುಪಿಯಿಂದ ಶಿವಮೊಗ್ಗಕ್ಕೆ ಪ್ರಯಾಣ ಮಾಡುತ್ತಿದ್ದಾಗ ಎದುರುಗಡೆ ಟಿಪ್ಪರ್ ಬಂದಿತ್ತು. ಸಂಭವಿಸಬಹುದಾಗಿದ್ದ ದುರಂತ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಈ ಸಂದರ್ಭ ಕಾರಿನ ಮೇಲ್ಛಾವಣಿಗೆ ಹಾನಿ ನಡೆದರೂ ದಂಪತಿಗೆ ಮಾತ್ರ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.