November 8, 2025
WhatsApp Image 2025-03-31 at 12.30.51 PM

ಬೆಂಗಳೂರು : ದೇಶಾದ್ಯಂತ ಮುಸ್ಲಿಮರು ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಈದ್-ಉಲ್-ಫಿತ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿದ್ದಾರೆ.ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಮರು ಪ್ರಾರ್ಥನೆ ವೇಳೆ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕೂಡ ಕಪ್ಪುಪಟ್ಟಿ ಧರಿಸಿಕೊಂಡು ನಮಾಜು ಮಾಡಿದ್ದಾರೆ. ಮೌಲಾನಾ ಮಕ್ಸುದ್ ಇಮ್ರಾನ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಪಾರ್ಥನೆ ವೇಳೆ ಬಲಗೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಿದ ವಕ್ಫ್‌ ತಿದ್ದುಪಡಿ ಮಸೂದೆ ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲಿದೆ ಎಂದು ಆಡಳಿತರೂಢ ಬಿಜೆಪಿ ಪ್ರತಿಪಾದಿಸಿದೆ. ಆದರೆ ವಿಪಕ್ಷಗಳು ಇದನ್ನು ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಮತ್ತು ವಕ್ಫ್‌ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಎಂದು ವಿರೋಧಿಸುತ್ತಿವೆ.

About The Author

Leave a Reply