ಶೀಘ್ರದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ..!!

ತಮಿಳುನಾಡು : ತಮಿಳುನಾಡಿನಲ್ಲಿ ಬಹುದೊಡ್ಡ ರಾಜಕೀಯ ಬದಲಾವಣೆ ಆಗುವ ಸಾಧ್ಯತೆ ಇದ್ದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಐಪಿಎಸ್ ಅಧಿಕಾರಿ ಹಾಗು ತಮಿಳುನಾಡಿನ ಹಾಲಿ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಬಿಜೆಪಿ ಅಧ್ಯಕ್ಷರ ರೇಸ್ ನಲ್ಲಿ ಇಬ್ಬರು ಹೆಸರು ಕೇಳಿ ಬಂದಿದ್ದು, ಹಾಗಾಗಿ ಕೇಂದ್ರ ಸಚಿವ ಮುರುಗನ್ ಮತ್ತು ತಮಿಳುಸೈ ಸುಂದರ್ ರಾಜನ ಹೆಸರು ಕೇಳಿ ಬಂದಿದೆ. ಎಐಎಡಿಎಂಕೆ ಬೇಡಿಕೆಗೆ ಬಿಜೆಪಿ ಹೈಕಮಾಂಡ್ ಮಣಿಯಿತಾ? ಎನ್ನುವ ಅನುಮಾನ ಇದೀಗ ಶುರುವಾಗಿದೆ. ಅಧ್ಯಕ್ಷ ಸ್ಥಾನ ಬದಲಾಯಿಸುವಂತೆ ಬಿಜೆಪಿ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿತ್ತು. ಹಾಗಾಗಿ ಇನ್ನು ಎರಡು ವಾರದಲ್ಲಿ ಹಾಲಿ ಅಧ್ಯಕ್ಷ ಅಣ್ಣಾಮಲೈ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply