October 12, 2025
th

ಬಂಟ್ವಾಳ : ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ  ರಿಕ್ಷಾ ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ದೈಕಿನಕಟ್ಟೆ ಎಂಬಲ್ಲಿ ನಡೆದಿದೆ,  ಈ ಘಟನೆಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಮಂಗಳೂರು ದೇರೇಬೈಲ್ ಸಮೀಪದ ನೆಕ್ಕಿಲಗುಡ್ಡೆ ಮಾಲೆಮಾರ್ ನಿವಾಸಿ ರಾಮಣ್ಣ ನಾಯ್ಕ (63) ಮೃತಪಟ್ಟವರೆಂದು ಗುರುತಿಸಲಾಗಿದೆ.

ಇವರು ಸಂಬಂಧಿಕರ ಆಟೋರಿಕ್ಷಾವೊಂದರಲ್ಲಿ  ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಳಕೆಬೈಲುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿ ರಾತ್ರಿಯೇ ವಾಪಾಸ್ ಮಂಗಳೂರಿನತ್ತ ಬರುತ್ತಿದ್ದಾಗ ದೈಕಿನಕಟ್ಟೆ ಬಳಿ ಚಾಲಕ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ರಾಮಣ್ಣ ಅವರು ರಿಕ್ಷಾದಡಿಗೆ ಸಿಲುಕಿ ಗಾಯಗೊಂಡಿದ್ದರು.  ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply