October 13, 2025
WhatsApp Image 2025-03-26 at 5.44.29 PM

ವಿಜಯಪುರ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರವಾದಿ ಕುರಿತು ನೀಡಿದ ಅವಹೇಳನಕಾರಿಯಾಗಿ ಆರೋಪದಡಿ ದೂರು ದಾಖಲಿಸಲಾಗಿದ್ದು, ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ಈ ದೂರು ದಾಖಲಿಸಿದ್ದಾರೆ. ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡುವ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

About The Author

Leave a Reply