October 12, 2025
c-vbc-bg

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ.

ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ ಮಳೆ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ 30 ಅಡಿ ಇದ್ದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದರಲ್ಲಿ 30 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಜಯಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಬೆಂಗಳೂರು ಡಿಪೋಗೆ ಸೇರಿದ ಬಸ್‌ ಇದಾಗಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

About The Author

Leave a Reply