
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು ಅಂತಿಮವಾಗಿ ಭಾರತಕ್ಕೆ ಹಸ್ತಾಂತರಿಸಲಾಗಿದೆ. ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರ ಭಯೋತ್ಪಾದಕ ದಾಳಿಯ ಸಂಚುಕೋರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಈಗ ಇಲ್ಲಿಂದ ಎನ್ಐಎ ಪ್ರಧಾನ ಕಚೇರಿಗೆ ಕರೆದೊಯ್ಯಲಾಗುವುದು.



ಭಾರತಕ್ಕೆ ಗಡಿಪಾರಾದ ತಹವೂರ್ ರಾಣಾ ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಇಳಿದರು
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯನ್ನು ಕಾರ್ಯಗತಗೊಳಿಸಲು ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಸಹ ಪಿತೂರಿ ನಡೆಸಿದ ಕೆನಡಾ ಮೂಲದ ಪಾಕಿಸ್ತಾನಿ ಪ್ರಜೆ ತಹವೂರ್ ರಾಣಾ ಅಂತಿಮವಾಗಿ ರಾಷ್ಟ್ರ ರಾಜಧಾನಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆಯ ನಡುವೆ ಭಾರತಕ್ಕೆ ಬಂದಿಳಿದಿದ್ದಾನೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸರ ಮೂರನೇ ಬೆಟಾಲಿಯನ್ ತಂಡವನ್ನು ತಹವೂರ್ ರಾಣಾಗಾಗಿ ನಿಯೋಜಿಸಲಾಗಿದೆ.