
ಮಂಗಳೂರು: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೊಷಿಸಿದ್ದಾರೆ. ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ”ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.



ದ.ಕ. ವಿದ್ಯಾವಂತರು, ಬುದ್ದಿವಂವರ ಜಿಲ್ಲೆಯಾಗಿದ್ದು ಅವರ ಬುದ್ದಿವಂತಿಗೆ, ಪ್ರತಿಭೆಗಳು ಹೊರ ದೇಶ ಗಳಿಗೆ ಬಳಕೆಯಾಗುತ್ತಿದೆ. ಅದನ್ನು ನಮ್ಮ ರಾಜ್ಯದಲ್ಲೇ ಬಳಸಿಕೊಳ್ಳುವಂತೆ ಯೋಜನೆಗಳನ್ನು ರೂಪಿಸಲಾಗುವುದು. ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜಾತಿ ಧರ್ಮಗಳನ್ನು ಮರೆರು ಕಂಬಳ ನಡೆಸಿ ಬೆಳೆಸಲು ಸರಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಡಿಕೆಶಿ ಭರವಸೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಮೂಳೂರು – ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ ಸಮಿತಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಇನಾಯತ್ ಅಲಿ ಅವರು, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರಾವಾಸೋದ್ಯಮಕ್ಕೆ ಒತ್ತು ನೀಡಬೇಕೆಂದು ಅವರು ಮನವಿ ಸಲ್ಲಿಸಿದರು.
ಇದೇ ಸಂದರ್ಭ ಕಂಬಳ ಕ್ಷೇತ್ರದ ಮೂವರು ಸಾಧಕರನ್ನು ಉಪಮುಖ್ಯಮಂತ್ರಿಗಳು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಕಂಬಳ ಸಮಿತಿಯ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ದೂಜ ಕೊಣವನ್ನು ಡಿಕೆಶಿ ಸನ್ಮಾನಿಸಿ ಅದರ ಪೋಸ್ಟಲ್ ಸ್ಟಾಂಪನ್ನಹ ಬಿಡುಗಡೆ ಗೊಳಿಸಿದರು. ಕಂಬಳ ಕ್ಷೇತ್ರದ ಗುಣಪಾಲ ಕಡಂಬ ಪ್ರಾಸ್ತಾವಿಕ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅದ್ಯಕ್ಷ ರಾಜೇಂದ್ರ ಕುಮಾರ್, ಮಾಜಿ ಸಚಿವರಾಗಿರುವ ರಮಾನಾಥ ರೈ, ಅಭಯಚಂದ್ರಜೈನ್, ವಿನಯ ಕುಮಾರ್ ಸೊರಕೆ, ವಿ.ಪ. ಸದಸ್ಯ ಐವನ್ ಡಿಸೋಜಾ, ಪದ್ಮರಾಜ್ ಪೂಜಾರಿ, ಶಕುಂತಲಾ ಶೆಟ್ಟಿ ಪುತ್ತೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೊದಲಾದವರು ಇದ್ದರು.