October 13, 2025
WhatsApp Image 2025-04-16 at 9.19.01 AM
ಮಂಗಳೂರು : ರಸ್ತೆಬದಿಯ ಸಣ್ಣ ಜಗಳ ಓರ್ವನ ಜೀವ ತೆಗೆಯುವ ಹಂತಕ್ಕೆ ಹೋಗಿದ್ದು ಮಾತ್ರ ವಿಷಾಧನೀಯ. ಮೂಲ್ಕಿ ಕೊಳ್ನಾಡು ನಿವಾಸಿ ಮೊಹಮ್ಮದ್ ಷರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದ ಹಳೆಯ ಗಲಾಟೆಯೇ ಈ ಕೊಲೆಗೆ ಕಾರಣ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಆಟೋಚಾಲಕರಾಗಿದ್ದ ಮಹಮ್ಮದ್ ಷರೀಫ್ ಅವರು ನಿತ್ಯವೂ ಮಂಗಳೂರಿನ ಕೊಟ್ಟಾರದ ಆಟೊ ನಿಲ್ದಾಣದಲ್ಲಿ ಬಾಡಿಗೆ ನಡೆಸುತ್ತಿದ್ದರು. ಬುಧವಾರ ಮನೆಯಿಮದ ಹೊರಟಿದ್ದ ಅವರು ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಕುಟುಂಬದವರು ಮೂಲ್ಕಿ ಠಾಣೆಗೆ ದೂರು ನೀಡಿದ್ದರು.
ಷರೀಫ್‌ ಅವರ ಮೃತದೇಹ ಕುಂಜತ್ತೂರು ಅಡ್ಕ ಪಳ್ಳ ಎಂಬಲ್ಲಿನ ಪಾಳುಬಿದ್ದ ಬಾವಿಯಲ್ಲಿ ಎಪ್ರಿಲ್ 10 ರಂದು ಪತ್ತೆಯಾಗಿತ್ತು. ಶವದ ಮೈಮೇಲೆ ಮಾರಕಾಯುಧದಿಂದ ಥಳಿಸಿದ ಗಾಯಗಳು ಪತ್ತೆಯಾಗಿದ್ದುವು. ಬಾವಿಯ ಸಮೀಪದಲ್ಲೇ ಇವರ ಆಟೊರಿಕ್ಷಾ ಕೂಡ ಸಿಕ್ಕಿತ್ತು. ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು ಆರೋಪಿ ಅಭಿಷೇಕ್ ಶೆಟ್ಟಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 ಗಲಾಟೆ ನಡೆದ ಬಳಿಕ ಆರೋಪಿ ಅಭಿಷೇಕ್ ಚಲಾಯಿಸುತ್ತಿದ್ದ ಬಸ್ ಗೆ ಷರೀಫ್ ಪರಿಚಯದ ಆಟೋ ಚಾಲಕರು ರಿಕ್ಷಾವನ್ನು ಅಡ್ಡಗಟ್ಟಿ ತೊಂದರೆ ಕೊಟ್ಟಿದ್ದಾರೆ. ಇದು ಷರೀಪ್ ಹೇಳಿಯೆ ಮಾಡಿಸಿದ್ದು ಎಂದು ಆರೋಪಿ ಅಭಿಷೇಕ್ ನಂಬಿದ್ದ, ಅಲ್ಲದೆ ಷರೀಫ್ ತನ್ನ ವಿರುದ್ದ ಕೆಲಸ ಮಾಡುತ್ತಿದ್ದ ಖಾಸಗಿ ಶಾಲೆಗೆ ದೂರು ಸಲ್ಲಿಸಿದ್ದಾನೆ ಇದರಿಂದಾಗಿ ತನ್ನ ಕೆಲಸ ಹೋಗಿತ್ತು ಎಂದು ಅಭಿಷೇಕ್ ನಂಬಿದ್ದ, ಶಾಲೆಯಲ್ಲಿ ಕೆಲಸ ಕಳೆದುಕೊಂಡ ಬಳಿಕ ಅಭಿಷೇಕ್ ಮನೆಯಲ್ಲಿ ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಸಂಸಾರದಲ್ಲಿ ಸಮಸ್ಯೆ ಪ್ರಾರಂಭವಾಗಿತ್ತು, ಹೀಗಾಗಿ ಈ ಎಲ್ಲಾ ಕಾರಣಕ್ಕೆ ಮಹಮ್ಮದ್ ಷರೀಫ್ ಕಾರಣ ಎಂದು ನಂಬಿದ್ದ ಅಭಿಷೇಕ ಷರೀಪ್ ಮೇಲೆ ಹಗೆ ತೀರಿಸಿಕೊಳ್ಳಲು ಯೋಚಿಸಿದ್ದ.

About The Author

Leave a Reply