October 13, 2025
WhatsApp Image 2025-04-17 at 3.03.02 PM

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್‌ ತಿದ್ದುಪಡಿ ಕಾಯಿದೆಗೆ(Waqf Amendment Act 2025) ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌(Supreme Court) ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆವರೆಗೆ ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರ್ಪಡೆ ಸೇರಿದಂತೆ ವಿವಾದಾತ್ಮಕ ವಕ್ಫ್ ಕಾನೂನಿನ ಕೆಲವು ತಿದ್ದುಪಡಿ ಮಾಡಲಾಗಿರುವ ಸಂಗತಿಗಳನ್ನು ಅನುಷ್ಠಾನಕ್ಕೆ ತರುವ ಮೇಲೆ ತಡೆ ಹೇರಿದೆ. ಬಹು ಚರ್ಚಿತ ಮತ್ತು ವಿವಾದಿತ 2025 ರ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮೇ 5 ರವರೆಗೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಈ ತಡೆಯಾಜ್ಞೆಯನ್ನು ಜಾರಿಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

2025 ರ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರಕ್ಕೆ ಒಂದು ವಾರದ ಕಾಲಾವಕಾಶ ನೀಡಿದೆ. ಇಂದು ನಡೆದ ವಿಚಾರಣೆ ವೇಳೆ ಕೇಂದ್ರವು ಮುಸ್ಲಿಮೇತರರನ್ನು ಕೇಂದ್ರ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ನೇಮಿಸಲಾಗುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನಾಂಕದವರೆಗೆ, ಅಧಿಸೂಚನೆಯ ಮೂಲಕ ಘೋಷಿಸಲಾದ ಅಥವಾ ಬಳಕೆದಾರರಿಂದ ವಕ್ಫ್ ಎಂದು ನೋಂದಾಯಿಸಲಾದ ಯಾವುದೇ ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡಲಾಗುವುದಿಲ್ಲ ಎಂದು ಕೇಂದ್ರ ಭರವಸೆ ನೀಡಿದೆ.

About The Author

Leave a Reply