October 12, 2025
WhatsApp Image 2025-04-21 at 9.30.06 AM

ಗದಗ : ಯುವಕನ ಕಿರುಕುಳದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.

ಗದಗ ತಾಲೂಕಿನ ಅಸುಂಡಿಯಲ್ಲಿ ಸಾಯಿರಾಬಾನು ನದಾಫ್ (29) ಎಂಬ ಯುವತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 8 ರಂದು ಸಾಯಿರಾಬಾನು ಮದುವೆ ನಿಗದಿಯಾಗಿತ್ತು.

ಮೈಲಾರಿ ಎಂಬ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ವರ್ಷಗಳ ಹಿಂದೆ ಮೈಲಾರಿ ಎಂಬ ಯುವಕನ ಜೊತೆ ಈಕೆಗೆ ಲವ್ ಆಗಿ ಬ್ರೇಕಪ್ ಆಗಿತ್ತು, ನಂತರ ಮೈಲಾರಿ ಮದುವೆ ಆಗಲು ಕಿರುಕುಳ ನೀಡುತ್ತಿದ್ದನು. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ. ವೀಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು.

About The Author

Leave a Reply