November 8, 2025
WhatsApp Image 2025-04-22 at 5.36.50 PM

ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಹಲವು ಕಡೆ ಬ್ರಾಹ್ಮಣ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಹಿಜಾಬ್ ಕಿಡಿ ಸ್ಫೋಟವಾಗಿದೆ.

ಹೌದು ಅಲಿಯಾ ಅಸ್ಸಾದಿ ಎಂಬ ಯುವತಿಯು ಟ್ವೀಟ್ ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ ಎಂದು ತಿಳಿಸಿದ್ದಾಳೆ.

ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡ್ತಾರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ.ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ? ಎಂದು ಬರೆದುಕೊಂಡಿದ್ದಾಳೆ.

About The Author

Leave a Reply