ಉಗ್ರರ ದಾಳಿಯಲ್ಲಿ ಕನ್ನಡಿಗನ ಸಾವು : ಸಿಎಂ ಸೂಚನೆ ಮೇರೆಗೆ ಕಾಶ್ಮೀರಕ್ಕೆ ಹೊರಟ ಅಧಿಕಾರಿಗಳ ತಂಡ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ತುರ್ತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಬಳಿಕ ಕಾಶ್ಮೀರಕ್ಕೆ ತೆರಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಇದರ ಬನ್ನೆಲೆ ಇದೀಗ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ತೆರಳಿದೆ.

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು. ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ ಅಧಿಕಾರಿಗಳ ಒಂದು ತಂಡ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಇದೀಗ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply