
ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಯಾಗಿದೆ.



ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕೃತಗೊಳಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ.೧೯ ಮತ್ತು ಜೂ.೨೦ರಂದು ಸಾಕ್ಷಿಗಳ ವಿಚಾರಣೆಗೆ ಡೇಟ್ ಫಿಕ್ಸ್ ಆಗಿದೆ. ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಧೀಶರು ಆದೇಶ ನೀಡಿದ್ದರು.