ಮೊಹಮ್ಮದ್ ಪೈಗಂಬರ್ ಬಗ್ಗೆ ಶಾಸಕ ಅವಹೇಳನಕಾರಿ ಹೇಳಿಕೆ ಆರೋಪ- ಇಂದು ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

 ಮೊಹಮ್ಮದ್ ಪೈಗಂಬರ್ ಬಗ್ಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಯತ್ನಾಳ್ ಹೇಳಿಕೆ ಖಂಡಿಸಿ ವಿಜಯಪುರದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

ವಿಜಯಪುರದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಮುಸ್ಲಿಂ ಆ್ಯಕ್ಷನ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಯತ್ನಾಳ್ ಅವರು ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಏಪ್ರಿಲ್ 15 ರಂದೇ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಆದರೆ ಯತ್ನಾಳ್ ಹತ್ಯೆ ಬಗ್ಗೆ ಆಡಿಯೋ, ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಏಪ್ರಿಲ್ 15 ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆ ಮುಂದೂಡಲಾಗಿತ್ತು.

ಇಂದು ವಿಜಯಪುರದಲ್ಲಿ ಪ್ರತಿಭಟನೆ ಮೂಲಕ ಯತ್ನಾಳ್ ವಿರುದ್ಧ ಮುಸ್ಲಿಂ ಮುಖಂಡರು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಶಾಸಕರೂ ಭಾಗಿಯಾಗಬೇಕೆಂದು ಕಮಿಟಿ ಮನವಿ ಮಾಡಿದೆ.

Leave a Reply