October 12, 2025
WhatsApp Image 2025-02-07 at 5.28.11 PM

 ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಮೊದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮಾಡಲಾಗುವುದು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಮೇ ತಿಂಗಳಲ್ಲೇ ಮೂರು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

About The Author

Leave a Reply