August 30, 2025
96

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ.

ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ.

ಇದರೊಂದಿಗೆ, ಅಣ್ಣ ಫಾಝಿಲ್ ಹತ್ಯೆ ಪ್ರತೀಕಾರಕ್ಕಾಗಿ ಆದಿಲ್ ಸುಹಾಸ್ ಶೆಟ್ಟಿ ಕೊಲೆಗೆ ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಖತರ್ನಾಕ್ ಪ್ಲಾನ್ ಮಾಡಿದ್ದಾನೆ ಎನ್ನಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳಲ್ಲಿ ಅಬ್ದುಲ್ ಸಫ್ವಾನ್ ಪ್ರಮುಖ ಆರೋಪಿಯಾಗಿದ್ದು,ಕಳೆದ 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು.ಇತ್ತ ಸಫ್ವಾನ್‌ಗೆ ತನ್ನನ್ನು ಸುಹಾಸ್ ಶೆಟ್ಟಿ ಕೊಲೆ ಮಾಡುವ ಭಯ ಕಾಡುತ್ತಿತ್ತು ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿಯನ್ನು ಮುಗಿಸಲು ತೀರ್ಮಾನಿಸಿದ್ದ.

ಅದಕ್ಕಾಗಿ ಫಾಜಿಲ್ ತಮ್ಮನನ್ನು ಸಂಪರ್ಕಿಸಿ ಕೊಲೆಯ‌ ಸ್ಕೆಚ್ ಹಾಕಿದ್ದರು. ಇತ್ತ ಆದಿಲ್ ಈ ಹತ್ಯೆಗೆ ಸಫ್ವಾನ್ ತಂಡಕ್ಕೆ ಬರೋಬ್ಬರಿ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್ ಸಂಪರ್ಕ ಮಾಡುತ್ತಾರೆ.

ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಶೆಟ್ಟಿಯ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

About The Author

Leave a Reply