November 8, 2025
WhatsApp Image 2025-05-03 at 3.23.20 PM

ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬAಧಪಟ್ಟAತೆ ಈಗಾಗಲೇ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ  ಆ್ಯಂಟಿ  ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹಸಚಿವರು ಭರವಸೆ ನೀಡಿದರು.

About The Author

Leave a Reply