October 22, 2025
WhatsApp Image 2025-05-06 at 3.40.34 PM

 ಇತ್ತೀಚ್ಚಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಕೇಶವಪುರ ಬಡಾವಣೆಯ ಅರುಣ್ (23) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ, ಸಂಜಯ್(20) ಎಂಬಾತ ಗಾಯಗೊಂಡಿದ್ದಾನೆ. ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ.

ಈ ವೇಳೆ, ಅರುಣ್ ಎಂಬಾತನಿಗೆ ಲಾಂಗ್​ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ವಿಷಯ ತಿಳಿಯುತ್ತಿದ್ದಂತೆ, ಹೊಸಮನೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply