August 30, 2025
08-05-2025AKPAK

ಲಾಹೋರ್: ಭಾರತದೊಂದಿಗಿನ ಉದ್ವಿಗ್ನತೆ ನಡುವೆ ಪಾಕಿಸ್ತಾನದ ಲಾಹೋರ್​ನಲ್ಲಿ ಇಂದು ಮೂರು ಸ್ಫೋಟ ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಫೋಟಗಳಿಂದಾಗಿ ಲಾಹೋರ್ ವಿಮಾನ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.

ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

About The Author

Leave a Reply