October 13, 2025
th (1)

ವಿಜಯಪುರ: ಪೆಹಲ್ಗಾಮ್‌ ಭಯೋತ್ಪಾದಕ ದಾಳಿ ಮೂಲಕ ಭಾರತವನ್ನು ಕೆಣಕಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ.

ಪಾಕಿಸ್ತಾನದ ಮಿಸೈಲ್ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಆದರೆ ಇಲ್ಲೊಬ್ಬಳು ಪಾಕ್ ಪರ ಬ್ಯಾಟ್ ಬಿಸಿದ್ದಾಳೆ.ಕರ್ನಾಟದಲ್ಲಿ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ. ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳಿಂದ ಒತ್ತಾಯಿಸಲಾಗಿದೆ. ಬಳಿಕ ಪಿಎಸ್ಐ ವಿನೋದ ದೊಡಮನಿಯಿಂದ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

About The Author

Leave a Reply