November 28, 2025
WhatsApp Image 2025-05-10 at 9.29.29 AM

ಮಂಗಳೂರು: 01 ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು (De Activate) ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಜನರಲ್ಲಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ವೆಸಗುವಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷಭಾವನೆ ಹುಟ್ಟುವಂತೆ beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನಲ್ಲಿ ಪೋಸ್ಟ್ ಗಳನ್ನು ಮಾಡಲಾಗುತ್ತಿತ್ತು , ಸದ್ರಿ ಇನ್ ಸ್ಟಾ ಗ್ರಾಂ ಫೇಜ್ ಗೆ 01 ಲಕ್ಷದಷ್ಟು ಸಂಖ್ಯೆಯ ಪಾಲೋವರ್ಸ್ ಹೊಂದಿದ್ದರು.

ಮಂಗಳೂರು ನಗರದ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಒಟ್ಟು 03 ಪ್ರಕರಣಗಳು ದಾಖಲಾಗಿದ್ದು, ಸದ್ರಿ ಪ್ರಕರಣಗಳಲ್ಲಿ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿರುತ್ತದೆ.

ಸದ್ರಿ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು, ಅದರಂತೆ ಸಂಬಂಧಪಟ್ಟ Law Enforcement Agency ರವರು beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ. (De Activate).

ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್. (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಅ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆಸಲಾಗಿದೆ.

About The Author

Leave a Reply