ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

ಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ.

ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ ಎನ್ನಲಾಗಿದೆ.

ಹೀಗಾಗಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply