

ವಿಟ್ಲ: ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಹಿಳೆಯು ತಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದ ಸಂದರ್ಭದಲ್ಲಿ, ತಮ್ಮ ಮನೆಗೆ ಸಾಗುವ ದಾರಿಯಲ್ಲಿ ಯಾರೋ ಕೆಲಸ ಮಾಡುತ್ತಿರುವ ಶಬ್ದ ಕೇಳಿಸಿದೆ. ಈ ಕುರಿತು ಪರಿಶೀಲಿಸಲು ಆಕೆ ಸ್ಥಳಕ್ಕೆ ತೆರಳಿ ಮೊಬೈಲ್ ಫೋನ್ ನಲ್ಲಿ ದೃಶ್ಯಾವಳಿಗಳನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ, ಅಲ್ಲಿಯೇ ಇದ್ದ ಪದ್ಮನಾಭ ಸಪಲ್ಯ ಅವರು ಇದನ್ನು ಗಮನಿಸಿ, ಏಕಾಏಕಿ ತಮ್ಮ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಂತ್ರಸ್ತೆ ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






