October 13, 2025
WhatsApp Image 2025-05-14 at 3.38.45 PM

ಬೆಂಗಳೂರು : ಇಷ್ಟು ದಿನ ಖಾಸಗಿ ಎಜೆನ್ಸಿಯವರು 108 ಆಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದ್ದರು. ಆದರೆ ಇನ್ಮುಂದೆ ರಾಜ್ಯದಲ್ಲಿ 108 ಆಂಬುಲೆನ್ಸ್ ಸರ್ವಿಸ್ ರಾಜ್ಯ ಸರ್ಕಾರವೆ ನೀಡುತ್ತದೆ ಎಂದು ಆರೋಗ್ಯ ಸಚವ ದಿನೇಶ್ ಗುಂಡೂರಾವ್ ತಿಳಿಸಿದರು.

ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್, ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಹೇಳಿದ್ದಾರೆ.108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.

About The Author

Leave a Reply