ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಎಂದು ತಿಳಿದುಬಂದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆಯನ್ನು ಅರೆಸ್ಟ್ ಮಾಡಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply