August 30, 2025
WhatsApp Image 2025-05-20 at 9.57.08 AM

ಮೈಸೂರು: ನನಗೆ ಈಗಾಗಲೇ 75 ವರ್ಷವಾಗಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಆಲೋಚನೆ ಇಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ ಎನ್ನುವ ಮೂಲಕ ರಾಜ್ಯ ಸಹಕಾರ ಸಚಿವ ಕೆ.ಎನ್.. ರಾಜಣ್ಣ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು. ‘ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು.

ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜಣ್ಣ ಅವರು ಸಹಕಾರ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು. ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

About The Author

Leave a Reply