November 8, 2025
WhatsApp Image 2025-05-20 at 9.15.26 AM
ಉಳ್ಳಾಲ: ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ. ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡವರು.ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ’ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.ಪೇಂಟರ್ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕೊಂಡು ಹೋದಾಗ ಮನೆ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು. ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ಸುಧೀರ್ ಅದೇ ಶಾಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ವಿಪರ್ಯಾಸ.

About The Author

Leave a Reply