

ದ.ಕ/ಉಡುಪಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚಂಡಮಾರುತದ ಭೀತಿ ಎದುರಾಗಿದೆ. ಮೇ.25ರಿಂದ ಮೇ.28ರವರೆಗೆ ನಾಲ್ಕು ದಿನಗಳ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಭಾಗಕ್ಕೂ ಅಪ್ಪಳಿಸಿರುವ ಈ ಚಂಡಮಾರುತವು ಗಂಟೆಗೆ 45ರಿಂದ 55ಕಿಮೀ ವೇಗದಲ್ಲಿ ಬೀಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರವಾಸಿಗರು, ಮೀನುಗಾರರು ಯಾರೂ ಕೂಡಾ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕರಾವಳಿಗರು ಗಾಳಿ ಮಳೆಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.






