November 29, 2025
WhatsApp Image 2025-05-25 at 4.25.20 PM

ಬೆಂಗಳೂರು: ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ ಕಾರಣದಿಂದ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ನಿರ್ಧರಿಸಿದ್ದಾರೆ.

ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.

ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಈ ಬಗ್ಗೆ ಮಾತನಾಡಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು, ನಮ್ಮ ಶಾಸಕರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಆರು ತಿಂಗಳು ಅಮಾನತು ಮಾಡಿದ್ದು ಸರಿಯಲ್ಲ. ಹೀಗೆ ಆದ್ರೇ ಸನದಲ್ಲಿ ಆಡಳಿತ ಪಕ್ಷವೇ ಇರಬೇಕಾಗುತ್ತೆ. ಸಿಎ ಸಹ ಇದು ಇಲ್ಲಿಗೆ ಮುಗಿಯಬೇಕು ಅಂದಿದ್ದಾರೆ. ಸ್ಪೀಕರ್ ಸಹ ನಾಳೆಯಿಂದ ಹಜ್ ಯಾತ್ರೆಗೆ ಹೋಗ್ತಿದ್ದಾರೆ. ಸದನ ಸರಿಯಾಗಿ ನಡೆಯಬೇಕೆಂದು ಸಕಾರಾತ್ಮಕ ಚರ್ಚೆ ಮಾಡಲಾಗಿದೆ. ಇದನ್ನ ಇಲ್ಲಿಗೆ ಅಂತ್ಯ ಮಾಡಬೇಕು ಅಂತ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಸಿಎಂ ಸ್ಪೀಕರ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

About The Author

Leave a Reply