
ಉಡುಪಿ: ನಗರದ ಅಜ್ಜರಕಾಡು ಬೇಥೆಲ್ ಪೆಂತೆ ಕೋಸ್ಟಲ್ ಚರ್ಚಿನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮೇ 25ರಂದು ಬೆಳಗ್ಗೆ ನಡೆದಿದೆ.


ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ(52) ಎಂದು ಗುರುತಿಸಲಾಗಿದೆ. ಇವರು ಚರ್ಚಿನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇವರನ್ನು ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯಾಧಿಕಾರಿಗಳು ಶಾಂತಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಖಾಯಿಲೆಯು ಉಲ್ಬಣಗೊಂಡು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
