August 30, 2025
WhatsApp Image 2025-05-28 at 7.35.52 PM

ಮಂಗಳೂರು: ಮಂಗಳೂರು ನಗರದಲ್ಲಿ ಕಳೆದ ನನ್ನ ಜೀವನ ಅವಧಿಯಲ್ಲಿ ಹಲವು ಬಾರಿ ಮನಾಪ ಕೌನ್ಸಿಲರ್, ಕಾರ್ಪೊರೇಟರ್, ಒಂದು ಬಾರಿ ಮೇಯರ್ ಆಗಿ ರಾಜಕೀಯ ಸೇವೆ ಸಲ್ಲಿಸಿದ್ದು ಇತ್ತೀಚೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಗಿದ್ದು, ಹಾಲಿ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಆಡಳಿತದಲ್ಲಿದ್ದು, ದ.ಕ.ಜಿಲ್ಲೆಯ ಮತ್ತು ರಾಜ್ಯದ ಇತರೆಡೆಗಳಲ್ಲಿ ಅಲ್ಪ ಸಂಖ್ಯಾತರರಿಗೆ ಆಗುತ್ತಿರುವ ಸಂಘ ಪರಿವಾರದ ದೌರ್ಜನ್ಯ ಮತ್ತು ಸ್ಥಳೀಯ ಪುಂಡರ ಕೋಮು ಪ್ರಚೋದಿತ ಚಟುವಟಿಕೆ, ದ್ವೇಷ ಭಾಷಣ, ಅಮಾಯಕ ವ್ಯಕ್ತಿಗಳ ಕೊಲೆ, ಅಮಾಯಕರ ಬಂಧನ, ವರ್ಗೀಯ ತಾರತಮ್ಯ, ಅಧಿಕಾರಿಗಳ ಮತೀಯ ತಾರತಮ್ಯ, ಕೊಳತ ಮಜಲು ಅಬ್ದುಲ್ ರಹಿಮಾನ್ ಯಾನೆ ರಹೀಮ್ ರವರ ಬರ್ಬರ ಹತ್ಯೆ ತಡೆಯಲು ಪೊಲೀಸು ಮತ್ತು ಗುಪ್ತಚರ ಅಧಿಕಾರಿಗಳ ವಿಫಲತೆ, ಜಿಲ್ಲೆಯಲ್ಲಿ ಘೋಷಿತ ಹತ್ಯೆಯ ಬೆದರಿಕೆಗೆ ಕಡಿವಾಣ ಹಾಕಲು ವಿಫಲತೆ, ಕಾನೂನು ಸುವ್ಯವಸ್ಥೆ ಪಾಲನೆ ವಿಫಲತೆ ಇತ್ಯಾದಿಯನ್ನು ನಿಭಾಯಿಸಲು ಹಾಲಿ ಸರಕಾರವು ವಿಫಲ ಹೊಂದಿದ ಕಾರಣಕ್ಕಾಗಿ, ಸಾರ್ವಜನಿಕರಿಗೆ ಸಮರ್ಪಕ ಜೀವನ ನಡೆಸುವ ಕನಿಷ್ಠ ಬದುಕು ನಿರ್ವಹಿಸಲು ಆಗುತ್ತಿರುವ ತೊಂದರೆ ಮತ್ತು ಮಾನವ ಹಕ್ಕುಗಳನ್ನು ಸಂರಕ್ಷಿಸಲು ವಿಫಲವಾದ ಕಾಂಗ್ರೆಸ್ ಪಕ್ಷದ ದ.ಕ. ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಬ್ದುಲ್ ರಹಿಮಾನ್ ಹತ್ಯೆಯನ್ನು ವೈಯುಕ್ತಿಕ ವೈಶ್ಯಮ್ಮಕ್ಕಾಗಿ ಹತ್ಯೆ ಎಂದು ಹೇಳಿಕೆ ನೀಡಿರುವುದು ಖಂಡನಾರ್ಹ, ಸಚಿವರಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾಗಿರುತ್ತದೆ. ಈ ಹೇಳಿಕೆಯನ್ನು ಸಚಿವರು ಹಿಂಪಡೆಯಬೇಕು.

About The Author

Leave a Reply