October 13, 2025
WhatsApp Image 2025-05-28 at 9.09.36 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ  ಮತ್ತು ಕಲಂದರ್ ಶಾಫಿ ಮೇಲೆ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಶುಕ್ರವಾರ (ಮೇ 30) ಇನ್ನಿಬ್ಬರನ್ನು ಬಂಧಿಸಲಾಗಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರ ಸಂಖ್ಯೆ 5ಕ್ಕೆ ಏರಿದೆ.

ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಮತ್ತು ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಮುಂದುವರೆದಿದ್ದು, ಅದರ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ದೀಪಕ್‌, ಸುಮಿತ್‌ ಎಂದು ಗುರುತಿಸಲಾಗಿದೆ.

ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕುರಿಯಾಲ್ ಗ್ರಾಮದ ಇರಕೋಡಿಯಲ್ಲಿ ಮೇ 27ರಂದು ಅಬ್ದುಲ್‌ ರಹಿಮಾನ್‌ ಕೊಲೆ ನಡೆದಿತ್ತು. ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳಿಂದ ಕೊಲೆ ಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಅವರು ನೀಡಿದ ಮಾಹಿತಿ ಆಧರಿಸಿ ನಾಸೀರ್ ಅವರು ನೀಡಿದ ದೂರಿನಂತೆ ಬಂಟ್ವಾಳ‌ ಪೊಲೀಸರು ಭಾರತೀಯ ನ್ಯಾಯ‌ ಸಂಹಿತೆ ಕಾಯ್ದೆಯಡಿ 2023 (Uls-103, 109, 118(1), 118(2), 190, 191(1), 191(2), 191(3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

About The Author

Leave a Reply