August 30, 2025
WhatsApp Image 2025-05-28 at 3.45.17 PM

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಇಂದು ಸಚಿವ ದಿನೇಶ್ ಗುಂಡೂರಾವ್ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿ, ಪರಿಹಾರದ ಚೆಕ್ ವಿತರಿಸಿದೆ. ಜೊತೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ಮಳೆಯ ಹಿನ್ನೆಲೆ ಸಾರ್ವಜನಿಕರ ಜೀವಹಾನಿ ತಪ್ಪಿಸಲು ನಮ್ಮ ಸರ್ಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದರು.

ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ  ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನವನ್ನು ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಗಳ ಕುರಿತು ಬರುವ ಸಾರ್ವಜನಿಕ ದೂರುಗಳಿಗೆ ಮೆಸ್ಕಾಂ ತಕ್ಷಣವೇ ಸ್ಪಂದಿಸಬೇಕು. ಮೆಸ್ಕಾಂ ಶಾಖಾ ಜೆಇ/ ಎಇಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಭೆಗೆ ಮೊದಲು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗುಡ್ಡ ಕುಸಿತದಿಂದ ನಾಲ್ವರು ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿದೆ. ಕಾಂತಪ್ಪ ಪೂಜಾರಿ ಅವರ ಮನೆಯಲ್ಲಿ ಮೂವರು ಹಾಗೂ ನೌಶಾದ್ ಅವರ ಮನೆಯಲ್ಲಿ ಒಬ್ಬ ಬಾಲಕಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಹಸ್ತಾಂತರಿಸಿದ್ದಾರೆ.

About The Author

Leave a Reply