August 30, 2025
WhatsApp Image 2025-06-01 at 11.04.53 AM

ಬೆಂಗಳೂರು: ದ್ವೇಷ ಭಾಷಣವನ್ನು ಯಾರೇ ಮಾಡಿದ್ರೂ ತಕ್ಷಣ ದೂರು ದಾಖಲಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ನಡೆದ ಡಿಸಿ, ಸಿಇಓ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಆದರೂ ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About The Author

Leave a Reply