ವಿಟ್ಲ: ಫೇಸ್‌ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ- ಯತೀಶ್ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ :ಪೆರುವಾಯಿ ಗ್ರಾಮದ ನಿವಾಸಿಯಾಗಿರುವ ಯತೀಶ್ ಎಂಬಾತನು ‘ಯತೀಶ್ ಪೆರುವಾಯಿ’ ಎಂಬ ಹೆಸರಿನ ತನ್ನ ಫೇಸ್‌ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮೂರು ಪೋಸ್ಟ್‌ಗಳನ್ನು ಪ್ರಸಾರ ಮಾಡಿದ್ದು, ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದರಿ ಪೋಸ್ಟ್‌ಗಳಿಂದಾಗಿ ಸಮಾಜದ ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ದಿನಾಂಕ 31-05-2025 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 72/2025 ರಂತೆ BNS 2023 ರ ಕಲಂ 353(2) ಅಡಿಯಲ್ಲಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಯುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಮತ್ತು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ.

Leave a Reply