November 8, 2025
WhatsApp Image 2025-06-02 at 9.59.34 AM

ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ.

ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಸದ್ರಿ ಕಲ್ಲಡ್ಕ ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ದಿನಾಂಕ: 02.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

About The Author

Leave a Reply