February 12, 2026
WhatsApp Image 2025-06-02 at 5.26.22 PM

ಪುತ್ತೂರು: ಹಿಂದು ಸಂಘಟನೆ ಮುಖಂಡ ಅರುಣ್‌ ಕುಮಾ‌ರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂ.6ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

About The Author

Leave a Reply